ADVERTISEMENT

ಪಾಕಿಸ್ತಾನ ಪರ ಬೇಹುಗಾರಿಕೆ: ಹರಿಯಾಣ ಮೂಲದ ಯುವಕನ ಬಂಧನ

ಪಿಟಿಐ
Published 18 ಮೇ 2025, 4:21 IST
Last Updated 18 ಮೇ 2025, 4:21 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಗುರುಗ್ರಾಮ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದಡಿ ನುಹ್ ಜಿಲ್ಲೆಯ ರಾಜಕ ಗ್ರಾಮದ 26 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಅಧಿಕಾರಿ ಮೂಲಕ ಭಾರತೀಯ ಸೇನೆ ಮತ್ತು ಇತರ ಮಿಲಿಟರಿ ಚಟುವಟಿಕೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಆರೋಪಿ ಅರ್ಮಾನ್‌ನನ್ನು ಬಂಧಿಸಲಾಗಿದೆ ಎಂದು ನುಹ್ ಪೊಲೀಸರು ಹೇಳಿದ್ದಾರೆ.

ಬೇಹುಗಾರಿಕೆ ನಡೆಸಿದ ಆರೋಪದಡಿ ಕಳೆದೊಂದು ವಾರದಲ್ಲಿ ಹರಿಯಾಣದಲ್ಲಿ ವರದಿಯಾಗಿರುವ ನಾಲ್ಕನೇ ಬಂಧನ ಇದಾಗಿದೆ. ಕೇಂದ್ರ ತನಿಖಾ ಸಂಸ್ಥೆಗಳಿಂದ ಸುಳಿವು ಪಡೆದ ನಂತರ ಅರ್ಮಾನ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರ್ಮಾನ್‌ ವ್ಯಾಟ್ಸ್‌ಆ್ಯಪ್‌ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಬಹುದಿನಗಳಿಂದ ಮಾಹಿತಿ ಹಂಚಿಕೊಳ್ಳುತ್ತಿದ್ದ. ಆತನ ಮೊಬೈಲ್ ತಪಾಸಣೆ ನಡೆಸಿದಾಗ ಪಾಕ್‌ ಮೂಲಕ ನಂಬರ್‌ಗಳಿಗೆ ಸಂಭಾಷಣೆ, ಫೋಟೊ ಮತ್ತು ವಿಡಿಯೊಗಳನ್ನು ಹಂಚಿಕೊಂಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ನ್ಯಾಯಾಲಯವು ಅರ್ಮಾನ್‌ನನ್ನು ಆರು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಅರ್ಮಾನ್‌ ವಿರುದ್ಧ 1923ರ ಅಧಿಕೃತ ರಹಸ್ಯ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 2,3,4,5 ಮತ್ತು 152ರ ಅಡಿಯಲ್ಲಿ ಮತ್ತು ದೇಶದ್ರೋಹ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳಿಗೆ ಭಾರತದ ಸೇನಾ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಆರೋಪದಲ್ಲಿ ಹರಿಯಾಣದ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.