ADVERTISEMENT

ಕೇರಳ | ಪೊಲೀಸರ ಮೇಲೆ ಹಲ್ಲೆ: 27 ಸಿಪಿಐ(ಎಂ) ಕಾರ್ಯಕರ್ತರ ವಿರುದ್ಧ ಪ್ರಕರಣ

ಪಿಟಿಐ
Published 20 ಫೆಬ್ರುವರಿ 2025, 16:04 IST
Last Updated 20 ಫೆಬ್ರುವರಿ 2025, 16:04 IST
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)   

ಕಣ್ಣೂರು: ಕೇರಳದ ತಲಶ್ಶೇರಿ ಬಳಿಯ ದೇವಾಲಯ ಉತ್ಸವದ ಸಂದರ್ಭದಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 27 ಸಿಪಿಐ(ಎಂ) ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಮಧ್ಯರಾತ್ರಿ 12.10ರ ಸುಮಾರಿಗೆ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ವಾಗ್ವಾದ ಪ್ರಾರಂಭವಾಗಿತ್ತು. ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಘರ್ಷಣೆಯನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಡಳಿತಾರೂಢ ಎಡಪಕ್ಷದ ಕಾರ್ಯಕರ್ತರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಆರೋಪಿಗಳು ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 27 ಸಿಪಿಐ(ಎಂ) ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.