ADVERTISEMENT

2.71 ಲಕ್ಷ ಹೊಸ ಪ್ರಕರಣ: ಕೋವಿಡ್ ದೃಢ ಪ್ರಮಾಣ ಅಲ್ಪ ಇಳಿಕೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2022, 5:50 IST
Last Updated 16 ಜನವರಿ 2022, 5:50 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಲ್ಲಿ 24 ಗಂಟೆಗಳಲ್ಲಿ ಹೊಸದಾಗಿ 2,71,202 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಇದೇ ಅವಧಿಯಲ್ಲಿ 314 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಕೇರಳ, ಮಹಾರಾಷ್ಟ್ರ, ದೆಹಲಿಯಲ್ಲಿ ವೃತರ ಸಂಖ್ಯೆ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

‌ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,50,377ಕ್ಕೆ ತಲುಪಿದ್ದು, ಕೋವಿಡ್ ದೃಢ ಪ್ರಮಾಣ 16.28ರಷ್ಟಿದೆ. 7,743ಓಮೈಕ್ರಾನ್‌ ಪ್ರಕರಣಗಳು ವರದಿಯಾಗಿವೆ.

ADVERTISEMENT

ಇದು ಹಿಂದಿನ ದಿನಕ್ಕೆ ಹೋಲಿಸಿದರೆ ಕೋವಿಡ್ ದೃಢ ಪ್ರಮಾಣದಲ್ಲಿ ಅಲ್ಪ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.