
ಸುಕ್ಮಾ (ಛತ್ತೀಸಗಢ): ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ 29 ನಕ್ಸಲರು ಪೊಲೀಸರ ಎದುರು ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾನೂನುಬಾಹಿರ ಸಿಪಿಐ (ಮಾವೋವಾದಿ) ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದ ಈ ನಕ್ಸಲರು, ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ಪ್ರಭಾವಿತಗೊಂಡು ಹಿರಿಯ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಗಳ ಮುಂದೆ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.
ಶರಣಾದವರ ಪೈಕಿ ಮಾವೋವಾದಿಗಳ ಪ್ರಮುಖ ಸಂಘಟನೆಯಾದ ಗೋಗುಂದಾದ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್‌ನ ಮುಖ್ಯಸ್ಥ ಪೋಡಿಯಂ ಬುಧ್ರಾ ಕೂಡ ಒಬ್ಬರು. ಇವರ ಸುಳಿವು ನೀಡಿದವರಿಗೆ ₹2 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು.
‘ಗೋಗುಂದಾದಲ್ಲಿ ಇತ್ತೀಚೆಗೆ ನಿರ್ಮಿಸಿದ ಭದ್ರತಾ ಶಿಬಿರವು ನಕ್ಸಲರ ಶರಣಾಗತಿಯಲ್ಲಿ ಮಹತ್ವದ ಪಾತ್ರವಹಿಸಿದೆ. ಅಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಳು ತೀವ್ರಗೊಂಡ ಬಳಿಕ ನಕ್ಸಲರ ಚಟುವಟಿಕೆ ಕಡಿಮೆಯಾಗಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.