ADVERTISEMENT

3ರಂದು ಅಮೇಠಿಗೆ ಮೋದಿ

ಪಿಟಿಐ
Published 2 ಮಾರ್ಚ್ 2019, 16:29 IST
Last Updated 2 ಮಾರ್ಚ್ 2019, 16:29 IST

ಅಮೇಠಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಕ್ಷೇತ್ರವಾದ ಅಮೇಠಿಗೆ ಭೇಟಿ ನೀಡಲಿದ್ದಾರೆ.

ಅಮೇಠಿ ಕ್ಷೇತ್ರ ವ್ಯಾಪ್ತಿಯ ಕೌಹಾರ್‌ನಲ್ಲಿ ಕಲಾಷ್ನಿಕೋವ್‌ ರೈಫಲ್‌ ತಯಾರಿಸುವ ಕಾರ್ಖಾನೆಯನ್ನು ಮೋದಿ ಉದ್ಘಾಟಿಸಲಿದ್ದಾರೆ. ಜತೆಗೆ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಇದೇ ಪ್ರಥಮ ಬಾರಿ ಮೋದಿ ಅವರು ಈ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ADVERTISEMENT

ಈ ಕ್ಷೇತ್ರದಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಇರಾನಿ ಅವರು 3 ಲಕ್ಷ ಮತಗಳನ್ನು ಪಡೆದಿದ್ದರು. ಈ ಬಾರಿಯೂ ಇರಾನಿ ಅವರನ್ನೇ ಕಣಕ್ಕಿಳಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.