ADVERTISEMENT

‘3 ವರ್ಷಗಳಲ್ಲಿ ವಿದ್ಯುತ್ ‘ಸ್ಮಾರ್ಟ್’ ಮೀಟರ್‌’

ಪಿಟಿಐ
Published 7 ಜೂನ್ 2018, 19:30 IST
Last Updated 7 ಜೂನ್ 2018, 19:30 IST

ನವದೆಹಲಿ: ದೇಶದ ಎಲ್ಲ ವಿದ್ಯುತ್ ಮೀಟರ್‌ಗಳು ಇನ್ನು ಮೂರು ವರ್ಷಗಳಲ್ಲಿ ಸ್ಮಾರ್ಟ್ ಪ್ರಿಪೇಯ್ಡ್ ಮೀಟರ್‌ಗಳಾಗಿ ಬದಲಾಗಲಿವೆ ಎಂದು ಕೇಂದ್ರ ಇಂಧನ ಸಚಿವ ಆರ್.ಕೆ. ಸಿಂಗ್ ಹೇಳಿದರು.

ಮೀಟರ್ ಉತ್ಪಾದಕರ ಜೊತೆ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು. ಮೀಟರ್ ಉತ್ಪಾದನೆ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಅವರು ಸೂಚನೆ ನೀಡಿದರು.

ಒಂದು ನಿರ್ದಿಷ್ಟ ಸಮಯದ ಬಳಿಕ ಸ್ಮಾರ್ಟ್ ಮೀಟರ್‌ಗಳನ್ನು ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳುವಂತೆ ಸಚಿವಾಲಯದ ಅಧಿಕಾರಿಗಳಿಗೂ ಸೂಚಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.