ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ(ಎಂಸಿಡಿ) ಮೂವರು ಸದಸ್ಯರು ಶನಿವಾರ ಬಿಜೆಪಿ ಸೇರಿದ್ದಾರೆ.
ಅನಿತಾ ಬಸೋಯಾ, ನಿಖಿಲ್ ಚಪ್ರಾನಾ, ಮತ್ತು ಧರ್ಮವೀರ್ ಬಿಜೆಪಿ ಸೇರಿದ ಪಾಲಿಕೆ ಸದಸ್ಯರಾಗಿದ್ದಾರೆ.
ವಿಕಸಿತ ಭಾರತ ಯೋಜನೆ ಅಡಿಯಲ್ಲಿ ದೆಹಲಿಯನ್ನು ಅಭಿವೃದ್ಧಿಪಡಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪವಾಗಿದೆ. ಇನ್ನು ಮುಂದೆ ಕೇಂದ್ರ, ವಿಧಾನಸಭೆ ಮತ್ತು ಮಹಾನಗರ ಪಾಲಿಕೆ ಮಟ್ಟದಲ್ಲಿ ‘ಟ್ರಿಪಲ್ ಎಂಜಿನ್‘ ಸರ್ಕಾರ ಇರಲಿದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ವಿರೇಂದ್ರ ಸಚ್‌ದೇವ್ ಹೇಳಿದರು.
ಮೇಯರ್ ಚುನಾವಣೆ ಬರಲಿರುವ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ. 2024ರ ನವೆಂಬರ್‌ನಲ್ಲಿ ನಡೆದ ಮೇಯರ್ ಚುನಾವಣೆಯಲ್ಲಿ ಎಎಪಿ ಮೂರು ಮತಗಳಿಂದ ಜಯಗಳಿಸಿತ್ತು.
ಪಾಲಿಕೆ ಸದಸ್ಯರು ಮಾತ್ರವಲ್ಲದೆ ಏಳು ಲೋಕಸಭಾ ಸಂಸದರು (ಬಿಜೆಪಿ ), ಮೂವರು ರಾಜ್ಯಸಭಾ ಸಂಸದರು (ಎಲ್ಲರೂ ಎಎಪಿಯವರು) ಹಾಗೂ 14 ನಾಮನಿರ್ದೇಶಿತ ಶಾಸಕರು ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಹೊಂದಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ 8 ಪಾಲಿಕೆ ಸದಸ್ಯರು ಶಾಸಕರಾಗಿ ಆಯ್ಕೆಯಾಗಿದ್ದರೇ. ಎಎಪಿಯ ಮೂವರು ಪಾಲಿಕೆ ಸದಸ್ಯರು ಶಾಸಕರಾಗಿ ಆಯ್ಕೆಯಾಗಿದ್ದಾರೆ.
2022ರಲ್ಲಿ ನಡೆದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಎಪಿ 134, ಬಿಜೆಪಿ 104, ಕಾಂಗ್ರೆಸ್ 09 ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳು ಗೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.