
ಆರ್‌ಎಸ್‌ಎಸ್ ಕಾರ್ಯಕಾರಿ ಸಭೆಯಲ್ಲಿ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭಾಗಿಯಾಗಿದ್ದರು
– ಪಿಟಿಐ ಚಿತ್ರ
ಜಬಲ್ಪುರ (ಮಧ್ಯಪ್ರದೇಶ): ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಕಾರ್ಯಕಾರಿ ಮಂಡಳಿಯ ಸಭೆಯು ಗುರುವಾರ ಜಬಲ್ಪುರದಲ್ಲಿ ಆರಂಭಗೊಂಡಿದೆ. ದೇಶದಾದ್ಯಂತ ಹಿಂದೂ ಸಮಾವೇಶಗಳನ್ನು ನಡೆಸುವ ಕುರಿತು ಮೂರು ದಿನಗಳ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಆರ್‌ಎಸ್‌ಎಸ್ ಸರಸಂಘಸಂಚಾಲಕ ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದ ಸಭೆಯನ್ನು ಉದ್ಘಾಟಿಸಿದರು.
‘ಸಂಘ 101ನೇ ವರ್ಷಕ್ಕೆ ಕಾಲಿಡುತ್ತಿದ್ದು. ಶತಮಾನೋತ್ಸವ ಆಚರಣೆ ‘ಪಂಚಪರಿವರ್ತನೆ’ಯ ಕುರಿತು ಚರ್ಚೆ ನಡೆಯಲಿದೆ. ದೇಶದಾದ್ಯಂತ ಒಂದು ಲಕ್ಷಕ್ಕೂ ಅಧಿಕ ಹಿಂದೂ ಸಮಾವೇಶಗಳನ್ನು ಆಯೋಜಿಸುವ ಗುರಿಯನ್ನು ಹೊಂದಲಾಗಿದೆ’ ಎಂದು ಆರ್‌ಎಸ್‌ಎಸ್ ತಿಳಿಸಿದೆ.
‘ಸಂಘಚಾಲಕರು, ಕಾರ್ಯವಾಹರು, ಪ್ರಚಾರಕರು ಸೇರಿದಂತೆ ಒಟ್ಟು 407 ಜನರು ಸಭೆಯಲ್ಲಿ ಭಾಗಿಯಾಗಿದ್ದಾರೆ’ ಎಂದು ಸಂಘದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.