ADVERTISEMENT

ರಾಜಸ್ಥಾನದ ದೇವಾಲಯದಲ್ಲಿ ಕಾಲ್ತುಳಿತ: ಮೂವರು ಸಾವು, ಇಬ್ಬರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಆಗಸ್ಟ್ 2022, 4:03 IST
Last Updated 8 ಆಗಸ್ಟ್ 2022, 4:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜೈಪುರ:ರಾಜಸ್ಥಾನದ ಸಿಕಾರ್‌ ಪಟ್ಟಣದ ದೇವಾಲಯವೊಂದರಲ್ಲಿ ಇಂದು (ಆ.8, ಸೋಮವಾರ) ಬೆಳಗ್ಗೆ ಸಂಭವಿಸಿದ ಕಾಲ್ತುಳಿತದ ವೇಳೆ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಖಾಟು ಶ್ಯಾಮ್‌ಜಿ ದೇವಾಲಯದಲ್ಲಿ ಮಾಸಿಕ ಜಾತ್ರೆಯ ವೇಳೆ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ.

ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಜೈಪುರ ಆಸ್ಪತ್ರೆಗೆ ದಾಖಲಿಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ADVERTISEMENT

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.