ADVERTISEMENT

ಪಟ್ನಾ | ಹೋಟೆಲ್‌ನಲ್ಲಿ ಭಾರಿ ಬೆಂಕಿ: ಮೂವರು ಮಹಿಳೆಯರು ಸೇರಿದಂತೆ 6 ಮಂದಿ ಸಾವು

ಪಿಟಿಐ
Published 25 ಏಪ್ರಿಲ್ 2024, 10:14 IST
Last Updated 25 ಏಪ್ರಿಲ್ 2024, 10:14 IST
<div class="paragraphs"><p>ಪಟ್ನಾ ಜಂಕ್ಷನ್ ರೈಲು ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿಅವಘಡ</p></div>

ಪಟ್ನಾ ಜಂಕ್ಷನ್ ರೈಲು ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿಅವಘಡ

   

(ಪಿಟಿಐ ಚಿತ್ರ)

ಪಟ್ನಾ(ಬಿಹಾರ): ಪಟ್ನಾ ಜಂಕ್ಷನ್ ರೈಲು ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಹಿಳೆಯರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಹೋಟೆಲ್‌ನಲ್ಲಿ ಸಿಲುಕಿದ್ದ ಸುಮಾರು 20ಕ್ಕೂ ಹೆಚ್ಚು ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.

ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಗ್ನಿಶಾಮಕ ಡಿಐಜಿ ಮೃತ್ಯುಂಜಯ್ ಕುಮಾರ್ ಚೌಧರಿ, ಬೆಳಿಗ್ಗೆ 11 ಗಂಟೆ ಸುಮಾರಿಗೆ ನಮಗೆ ಮಾಹಿತಿ ಸಿಕ್ಕಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಸೂಕ್ತ ತನಿಖೆ ಬಳಿಕ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.