ಬಂಧನ
(ಸಾಂದರ್ಭಿಕ ಚಿತ್ರ)
ಇಂಫಾಲ: ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದಡಿ ನಿಷೇಧಿತ ಸಂಘಟನೆಯ ಕೇಡರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಬಂಧಿತನನ್ನು ನಿಷೇಧಿತ ಸಂಘಟನೆ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ (ಪೀಪಲ್ಸ್ ವಾರ್ ಗ್ರೂಪ್) ಸದಸ್ಯ ಎಂದು ಗುರುತಿಸಲಾಗಿದೆ. ಆರೋಪಿಯು ಸುಲಿಗೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಆತನಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಮಣಿಪುರದ ಚುರಾಚಂದ್‌ಪುರ ಮತ್ತು ಪಶ್ಚಿಮ ಇಂಫಾಲ್‌ದ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತರಿಂದ ಪಿಸ್ತೂಲ್‌ಗಳು, ಮೆಷಿನ್ ಗನ್, ರೈಫಲ್, ಮದ್ದುಗುಂಡುಗಳು ಮತ್ತು ನೋಂದಣಿಯಾಗದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.