ADVERTISEMENT

ಜಮ್ಮು ಕಾಶ್ಮೀರದ ಬಡ್ಗಾಮ್‌ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಮೂವರು ಉಗ್ರರು ಬಲಿ

ಐಎಎನ್ಎಸ್
Published 7 ಜನವರಿ 2022, 6:58 IST
Last Updated 7 ಜನವರಿ 2022, 6:58 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಡ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ರಾತ್ರಿ ಇಡೀ ನಡೆಸಿದ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ತಡರಾತ್ರಿ ಬಡ್ಗಾಮ್‌ನ ಜೋಲ್ವಾ ಗ್ರಾಮದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಸತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ADVERTISEMENT

‘ಮೃತ ಮೂವರೂ ಉಗ್ರರು ಭಯೋತ್ಪಾದಕ ಸಂಘಟನೆ ಜೆಇಎಂ ಜತೆಗೆ ಸಂಬಂಧ ಹೊಂದಿದ್ದರು. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಮೂರು ಎಕೆ–56 ಬಂದೂಕುಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ,‘ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.

ಮೃತ ಉಗ್ರರ ಪೈಕಿ ಒಬ್ಬನನ್ನು ಶ್ರೀನಗರದ ನಿವಾಸಿ ವಸೀಂ ಎಂದು ಗುರುತಿಸಲಾಗಿದ್ದು, ಉಳಿದ ಇಬ್ಬರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಈ ವರ್ಷ ಭದ್ರತಾ ಪಡೆಗಳು 16 ಉಗ್ರರನ್ನು ಈ ವರೆಗೆ ಹೊಡೆದುರುಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.