ADVERTISEMENT

ಜಮ್ಮು ಮತ್ತು ಕಾಶ್ಮೀರ: ಅಲ್ಪಸಂಖ್ಯಾತ ಸಮುದಾಯದ 14 ಮಂದಿ ಹತ್ಯೆ-ನಿತ್ಯಾನಂದ ರಾಯ್‌

ಪಿಟಿಐ
Published 7 ಡಿಸೆಂಬರ್ 2022, 11:25 IST
Last Updated 7 ಡಿಸೆಂಬರ್ 2022, 11:25 IST
ನಿತ್ಯಾನಂದ ರೈ
ನಿತ್ಯಾನಂದ ರೈ   

ನವದೆಹಲಿ: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವರ್ಷದ ನವೆಂಬರ್‌ವರಗೆ ಮೂರು ಮಂದಿ ಕಾಶ್ಮೀರಿ ಪಂಡಿತರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ 14 ಮಂದಿ ಹತ್ಯೆಯಾಗಿದ್ದಾರೆ’ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಅವರು ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದರು.

‘ಅಲ್ಲದೇ ಈ ವರ್ಷದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ 123 ಭಯೋತ್ಪಾದಕ ಕೃತ್ಯಗಳಲ್ಲಿ 180 ಉಗ್ರರು, 31 ಮಂದಿ ಭದ್ರತಾ ಸಿಬ್ಬಂದಿ ಹಾಗೂ 31 ಮಂದಿ ನಾಗರಿಕರು ಮೃತಟ್ಟಿದ್ದಾರೆ’ ಎಂದೂ ಅವರು ಹೇಳಿದರು.

‘ಕಾಶ್ಮೀರಿ ಪಂಡಿತ್ ಸಂಘರ್ಷ ಸಮಿತಿಯ ಕೆಲವು ಮಾಧ್ಯಮ ವರದಿಗಳು ಅವರ ಭದ್ರತಾ ಕಾಳಜಿಗಳನ್ನು ಎತ್ತಿ ತೋರಿಸಿವೆ. ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಂಡಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.