ADVERTISEMENT

ಮಹಾರಾಷ್ಟ್ರದಲ್ಲಿ ಅಗ್ನಿ ಅನಾಹುತ: ಮೂವರ ಸಾವು, ಹಲವರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಅಕ್ಟೋಬರ್ 2022, 14:36 IST
Last Updated 26 ಅಕ್ಟೋಬರ್ 2022, 14:36 IST
   

ಮಹಾರಾಷ್ಟ್ರದ ಬೋಯಿಸಾರ್‌ನ ರಾಸಾಯನಿಕ ಕಂಪನಿಯೊಂದರಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಮೂವರು ಸಾವನ್ನಪ್ಪಿದ್ದು ಹಲವರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಪ್ರಸ್ತುತ 11 ಜನರನ್ನು ಬೆಂಕಿಯಿಂದ ರಕ್ಷಿಸಿ ಶಿಂಧೆ ಆಸ್ಪತ್ರೆಗೆ ಸೇರಿಸಲಾಗಿದೆ. ರಾಸಾಯನಿಕ ಬಾಯ್ಲರ್‌ ಸ್ಫೋಟದಿಂದ ಈ ಅನಾಹುತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಹಲವರು ಬೆಂಕಿಯಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.