ADVERTISEMENT

ಜಾರ್ಖಂಡ್‌: ವಿದ್ಯುತ್‌ ತಂತಿ ತಗುಲಿ 3 ಸಾವು, 9 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 11:18 IST
Last Updated 16 ಅಕ್ಟೋಬರ್ 2021, 11:18 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಗುಮ್ಲಾ, ಜಾರ್ಖಂಡ್‌: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಅಧಿಕ ವೋಲ್ಟೇಜ್‌ ವಿದ್ಯುತ್‌ ಪ್ರವಹಿಸುತ್ತಿದ್ದ ತಂತಿ ತಗುಲಿ ಇಬ್ಬರು ಮಹಿಳೆಯರು ಸೇರಿ ಮೂವರು ಕಾರ್ಮಿಕರು ಮೃತಪಟ್ಟಿದ್ದು 9 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.

ದುಮರ್ತೋಳಿ ಮೊಹಲ್ಲಾದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಕಾರ್ಮಿಕರು ಕಾಂಕ್ರೀಟ್‌ ಮಿಶ್ರಣದ ಯಂತ್ರವನ್ನು ಹಿಡಿದುಕೊಂಡು ಹೋಗುವಾಗ, ಸಡಿಲವಾಗಿ ನೇತಾಡುತ್ತಿದ್ದ ವಿದ್ಯುತ್‌ ತಂತಿಯನ್ನು ಮುಟ್ಟಿದ್ದಾರೆ.

ಆಗ ಸಂಭವಿಸಿದ ವಿದ್ಯುದಾಘಾತದಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ರಿಮ್ಸ್‌) ಶನಿವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.