ADVERTISEMENT

ಪಂಜಾಬ್ ಮುಖ್ಯಮಂತ್ರಿ ಚನ್ನಿ ಕುಟುಂಬದ ಮೂವರು ಸದಸ್ಯರಿಗೆ ಕೋವಿಡ್

ಪಿಟಿಐ
Published 8 ಜನವರಿ 2022, 9:02 IST
Last Updated 8 ಜನವರಿ 2022, 9:02 IST
ಚರಣ್‌ಜಿತ್ ಸಿಂಗ್ ಚನ್ನಿ
ಚರಣ್‌ಜಿತ್ ಸಿಂಗ್ ಚನ್ನಿ   

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಕುಟುಂಬದ ಮೂವರು ಸದಸ್ಯರಿಗೆ ಕೋವಿಡ್ ದೃಢಪಟ್ಟಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಹಾಗಿದ್ದರೂ ಮುಖ್ಯಮಂತ್ರಿ ಚರಣ್‌ಜಿತ್ ಅವರಿಗೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ತಿಳಿಸಿದ್ದಾರೆ.

ಚನ್ನಿ ಅವರ ಪತ್ನಿ ಕಮಲಜಿತ್ ಕೌರ್, ಪುತ್ರ ನವಜಿತ್ ಸಿಂಗ್ ಮತ್ತು ಸೊಸೆ ಸಿಮ್ರಾನ್‌ಧೀರ್ ಕೌರ್ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಮೊಹಲಿಯ ಸಿವಿಲ್ ಸರ್ಜನ್ ಡಾ. ಆದರ್ಶಪಾಲ್ ಕೌರ್ ಮಾಹಿತಿ ನೀಡಿದ್ದಾರೆ.

ಅವರಿಗೆಲ್ಲರಿಗೂ ಸೌಮ್ಯ ರೋಗಲಕ್ಷಣಗಳು ಕಂಡುಬಂದಿದ್ದು, ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದಾರೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿಗಳ ವಿರುದ್ಧ ಸಾಕಷ್ಟು ಟೀಕೆಗಳು ಎದುರಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.