ADVERTISEMENT

ವಾಹನ ಮಗುಚಿ ಬಿದ್ದು ಮೂವರು ವಲಸೆ ಕಾರ್ಮಿಕರ ಸಾವು, 12 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 19 ಮೇ 2020, 3:13 IST
Last Updated 19 ಮೇ 2020, 3:13 IST
ಉತ್ತರ ಪ್ರದೇಶದ ಜಾನ್ಸಿ-ಮಿರ್ಜಾಪುರ್ ಹೆದ್ದಾರಿಯಲ್ಲಿ ಡಿಸಿಎಂ ವಾಹನ ಮಗುಚಿ ಮೂವರು ಕಾರ್ಮಿಕರು ಸಾವು
ಉತ್ತರ ಪ್ರದೇಶದ ಜಾನ್ಸಿ-ಮಿರ್ಜಾಪುರ್ ಹೆದ್ದಾರಿಯಲ್ಲಿ ಡಿಸಿಎಂ ವಾಹನ ಮಗುಚಿ ಮೂವರು ಕಾರ್ಮಿಕರು ಸಾವು   

ಮಹೋಬಾ: ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಡಿಸಿಎಂ ವಾಹನ ಮಗುಚಿ ಮೂವರು ವಲಸೆ ಕಾರ್ಮಿಕರು ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ಜಾನ್ಸಿ-ಮಿರ್ಜಾಪುರ್ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎಎನ್‌ಐ ವರದಿ ಮಾಡಿದೆ.

ಸರಕು ಸಾಗಣೆ ಮಾಡುವ ವಾಹನದಲ್ಲಿ ಸುಮಾರು 17 ಮಂದಿ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ADVERTISEMENT

ಮೇ 16ರಂದು ಉತ್ತರ ಪ್ರದೇಶದ ಔರೆಯಾ ಸಮೀಪ ಎರಡು ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 26 ಮಂದಿ ಮೃತಪಟ್ಟಿದ್ದರು. ಎರಡೂ ವಾಹನಗಳು ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದವು. ದುರಂತದಲ್ಲಿ 34 ಮಂದಿ ಗಾಯಗೊಂಡಿದ್ದರು.

ಮತ್ತೊಂದೆಡೆ ಮೇ 8ರಂದು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಗೂಡ್ಸ್ ರೈಲು ಹರಿದು ಹಳಿ ಮೇಲೆ ಮಲಗಿದ್ದ 16 ಮಂದಿ ವಲಸೆ ಕಾರ್ಮಿಕರು ಮೃತಪಟ್ಟು, ಐವರು ಗಾಯಗೊಂಡಿದ್ದರು. ಔರಂಗಾಬಾದ್‌ನ ಕರ್ಮಡ್ ಪೊಲೀಸ್ ಠಾಣೆ ಸರಹದ್ದಿನ ಪರ್ಬನಿ-ಮನ್ಮಡ್ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಗೂಡ್ಸ್ ರೈಲು ಜಲ್ನಾದಿಂದ ಔರಂಗಾಬಾದ್ ಕಡೆಗೆ ಸಂಚರಿಸುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.