ADVERTISEMENT

ಜಮ್ಮು–ಕಾಶ್ಮೀರದಲ್ಲಿ ಎನ್‌ಕೌಂಟರ್: ಮೂವರು ಉಗ್ರರ ಹತ್ಯೆ, ಯೋಧ ಹುತಾತ್ಮ

ಪಿಟಿಐ
Published 27 ನವೆಂಬರ್ 2018, 11:03 IST
Last Updated 27 ನವೆಂಬರ್ 2018, 11:03 IST
ಚಿತ್ರ ಕೃಪೆ – ಎಎನ್‌ಐ
ಚಿತ್ರ ಕೃಪೆ – ಎಎನ್‌ಐ   

ಶ್ರೀನಗರ: ಜಮ್ಮು – ಕಾಶ್ಮೀರದ ಕುಲ್ಗಾಮ ಮತ್ತು ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಕುಲ್ಗಾಮ ಜಿಲ್ಲೆಯ ರೆಡ್ವಾನಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಮಧ್ಯರಾತ್ರಿ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರಗಾಮಿಗಳು ಬಲಿಯಾಗಿದ್ದರೆ, ಮೂವರು ಸೈನಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬ ಯೋಧ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಗ್ರರು ಸಂಗ್ರಹಿಸಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಪೊಲೀಸರು ಹೇಳಿದ್ದಾರೆ.

ADVERTISEMENT

ಪುಲ್ವಾಮಾ ಜಿಲ್ಲೆಯ ಹಫೂ ಪ್ರದೇಶದಲ್ಲಿ ಮತ್ತೊಂದು ಎನ್‌ಕೌಂಟರ್ ನಡೆದಿದೆ. ಅಪರಿಚಿತ ಉಗ್ರ ಸೈನಿಕರ ಗುಂಡಿಗೆ ಬಲಿಯಾಗಿದ್ದಾನೆ. ಮೂವರು ಉಗ್ರರ ಗುರುತು ಮತ್ತು ಸದಸ್ಯತ್ವ ಹೊಂದಿರುವ ಉಗ್ರ ಸಂಘಟನೆ ಯಾವುದೆಂಬುದನ್ನು ಖಚಿಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.