ADVERTISEMENT

ಪಾಕಿಸ್ತಾನದಿಂದ ತರಬೇತಿ ಪಡೆದಿದ್ದ ಶಸ್ತ್ರಸಜ್ಜಿತ ಮೂವರು ಉಗ್ರರ ಹತ್ಯೆ

ಏಜೆನ್ಸೀಸ್
Published 1 ಜೂನ್ 2020, 6:01 IST
Last Updated 1 ಜೂನ್ 2020, 6:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಜೌರಿ: ಪಾಕಿಸ್ತಾನದಿಂದ ತರಬೇತಿ ಪಡೆದ ಭಾರಿ ಶಸ್ತ್ರ ಸಜ್ಜಿತ ಮೂವರು ಭಯೋತ್ಪಾದಕರನ್ನು ಪ್ರತಿ-ಒಳನುಸುಳುವಿಕೆ ತಡೆ ಕಾರ್ಯಾಚರಣೆಯಲ್ಲಿ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆಯು ತಿಳಿಸಿದೆ.

ಮೇ 28ರಿಂದಲೂ ನಡೆಯುತ್ತಿರುವ ಪ್ರತಿ-ಒಳನುಸುಳುವಿಕೆ ಕಾರ್ಯಾಚರಣೆಯಲ್ಲಿ, ಭಾರತೀಯ ಸೇನೆಯ ಎಚ್ಚರಿಕೆ ಪಡೆಗಳು ನೌಶೇರಾ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಬಿಡ್ ಅನ್ನು ತೆಗೆದುಹಾಕಿದೆ. ಪಾಕಿಸ್ತಾನದಿಂದ ತರಬೇತಿ ಪಡೆದ ಭಾರಿ ಶಸ್ತ್ರಸಜ್ಜಿತ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಸದ್ಯ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಈ ಹಿಂದೆ, ಕಳೆದ ವರ್ಷ ಫೆಬ್ರುವರಿಯಲ್ಲಿ ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ನಡೆಸಿದ ರೀತಿಯಲ್ಲೇ ಮತ್ತೊಂದು ದಾಳಿ ನಡೆಸಲು ಯೋಜನೆ ರೂಪಿಸಿದ್ದ ಉಗ್ರರ ಪ್ರಯತ್ನವನ್ನು ಸಮಯೋಚಿತ ಮಾಹಿತಿ ಮೇರೆಗೆ ತಪ್ಪಿಸಲಾಗಿತ್ತು.

ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ಕಾರು ಬಾಂಬ್‌ ಮೂಲಕ ದೊಡ್ಡ ಪ್ರಮಾಣದಲ್ಲಿ ಆತ್ಮಹತ್ಯೆ ದಾಳಿ ನಡೆಸಲು ಹಿಜ್ಬುಲ್‌ ಮುಜಾಹೀದ್ದೀನ್‌ (ಎಚ್‌ಎಂ) ಮತ್ತು ಜೈಷ್‌–ಇ–ಮೊಹಮ್ಮದ್ ‌(ಜೆಇಎಂ) ಉಗ್ರಗಾಮಿ ಸಂಘಟನೆಗಳು ಈ ಸಂಚು ರೂಪಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.