ಗುವಾಹಟಿ (ಪಿಟಿಐ): ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ನೆರೆ ರಾಜ್ಯದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ₹7 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
‘ಡ್ರಗ್ಸ್-ಮುಕ್ತ ಸಮಾಜ ಅಸ್ಸಾಂನ ಧ್ಯೇಯವಾಗಿದ್ದು, ಕ್ಯಾಚಾರ್ ಪೊಲೀಸರು ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಸುಮಾರು ₹7 ಕೋಟಿ ಮೌಲ್ಯದ 1.2 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಶುಕ್ರವಾರ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.