ಪ್ರಾತಿನಿಧಿಕ ಚಿತ್ರ
ಬಾಲೇಶ್ವರ: ಬುಡಕಟ್ಟು ಸಮುದಾಯದವರನ್ನು ಮತಾಂತರಗೊಳಿಸಲು ಯತ್ನಿಸಿದ ಆರೋಪದಲ್ಲಿ ಮೂವರನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆ ಒಡಿಶಾದ ಬಾಲೇಶ್ವರ ಜಿಲ್ಲೆಯಲ್ಲಿ ನಡೆದಿದೆ.
ಈ ಬಗ್ಗೆ ಶನಿವಾರ ಮಾಹಿತಿ ನೀಡಿರುವ ಪೊಲೀಸರು, ಘಟನೆಯು ಗೊವರ್ಧನಪುರ ಗ್ರಾಮದಲ್ಲಿ ಗುರುವಾರ ನಡೆದಿದೆ. ಅದಕ್ಕೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ಎಂದಿದ್ದಾರೆ.
ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಕಾರ್ಯಪ್ರವೃತರಾದ ಪೊಲೀಸರು, ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ರಕ್ಷಿಸಿದ್ದಾರೆ ಎಂದು ರೆಮುನಾ ಠಾಣಾಧಿಕಾರಿ ಸುಭಾಷ್ ಚಂದ್ರ ಮಲ್ಲಿಕ್ ತಿಳಿಸಿದ್ದಾರೆ.
'ಪ್ರಾಥಮಿಕ ತನಿಖೆಯ ಬಳಿಕ, ಎರಡೂ ಗುಂಪಿನ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಗ್ರಾಮದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಪ್ರಯತ್ನ ಮುಂದುವರಿದಿದೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.