ADVERTISEMENT

ಪುಲ್ವಾಮಾ ಕಾರ್ಯಾಚರಣೆ: 4 ಮಂದಿ ಉಗ್ರರ ಹತ್ಯೆ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ

ಏಜೆನ್ಸೀಸ್
Published 1 ಏಪ್ರಿಲ್ 2019, 2:43 IST
Last Updated 1 ಏಪ್ರಿಲ್ 2019, 2:43 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಸಿಬ್ಬಂದಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ನಾಲ್ಕು ಮಂದಿ ಉಗ್ರರು ಬಲಿಯಾಗಿದ್ದಾರೆ. ಇದೇ ಕಾರ್ಯಾಚರಣೆಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಭದ್ರತಾ ಸಿಬ್ಬಂದಿ ಗುಂಡಿಗೆ ಬಲಿಯಾದವರು ಎಷ್ಕರ್‌ -ಎ–ತಯಬಾ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ. ಪುಲ್ವಾಮಾದ ಲಸ್ಸಿಪೊರಾದಲ್ಲಿ ಉಗ್ರರರು ಅಡಿಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಸೋಮವಾರ ಬೆಳಗಿನ ಜಾವ ಶೋಧ ಕಾರ್ಯಾಚರಣೆ ನಡೆಸಿದರು.

ಎಚ್ಚೆತ್ತ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಚಕಮಕಿಗೆ ಕಾರಣವಾಯಿತು. ಈ ವರೆಗೂ ಶೋಧ ಕಾರ್ಯಾಚರಣೆಯಲ್ಲಿ ನಾಲ್ಕು ಉಗ್ರರು ಮೃತಪಟ್ಟು ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ADVERTISEMENT

ನಾಲ್ಕು ರೈಫಲ್‌ಗಳು ಹಾಗೂ ಇತರೆ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿ ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.