ADVERTISEMENT

ತೆಲಂಗಾಣದಲ್ಲಿ ಕೊಳವೆಬಾವಿಗೆ ಬಿದ್ದ ಮೂರು ವರ್ಷದ ಬಾಲಕ 

​ಪ್ರಜಾವಾಣಿ ವಾರ್ತೆ
Published 28 ಮೇ 2020, 6:26 IST
Last Updated 28 ಮೇ 2020, 6:26 IST
ಬಾಲಕ ಬಿದ್ದಿರುವ ಕೊಳವೆಬಾವಿ
ಬಾಲಕ ಬಿದ್ದಿರುವ ಕೊಳವೆಬಾವಿ    

ಮೇಡಕ್: ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ಬುಧವಾರ ಮೂರು ವರ್ಷದ ಬಾಲಕ ಆಕಸ್ಮಿಕವಾಗಿ 120 ಆಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಬಾಲಕನನ್ನು ಮೇಲೆತ್ತಲು ಕೊಳವೆ ಬಾವಿ ಸುತ್ತಲೂ ಮಣ್ಣು ಅಗೆಯಲಾಗುತ್ತಿದೆ. ಈ ಕೆಲಸದಲ್ಲಿ ಎನ್‌ಡಿಆರ್‌ಎಫ್‌ ತಂಡವೂ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಕೊಳವೆಬಾವಿಯೊಳಗೆ ಆಕ್ಸಿಜನ್ ಪೂರೈಕೆ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಮೇಡಕ್‌ ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆ ತನ್ನ ಅಜ್ಜ ಮತ್ತು ಅಪ್ಪನೊಂದಿಗೆ ಹೊಲದಲ್ಲಿ ಓಡಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದಾನೆ. ಬಾಲಕನ ಕುಟುಂಬ ಇತ್ತೀಚೆಗಷ್ಟೇ ಹೊಲದಲ್ಲಿ ಮೂರು ಕೊಳವೆಬಾವಿಗಳನ್ನು ಕೊರೆಸಿತ್ತು. ಆದರೆ, ಒಂದರಲ್ಲಿಯೂ ನೀರು ಸಿಕ್ಕಿರಲಿಲ್ಲ. ವಿಫಲವಾದ ಕೊಳವೆಬಾವಿಗಳನ್ನು ಮುಚ್ಚದೇ ಇದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.