ADVERTISEMENT

ಗಂಡ-ಹೆಂಡತಿ ಜಗಳದಲ್ಲಿ 3 ವರ್ಷದ ಕಂದನನ್ನು ನೆಲಕ್ಕೆ ಅಪ್ಪಳಿಸಿದ ಅಪ್ಪ, ಮಗಳು ಸಾವು

ಪಿಟಿಐ
Published 14 ಸೆಪ್ಟೆಂಬರ್ 2020, 5:02 IST
Last Updated 14 ಸೆಪ್ಟೆಂಬರ್ 2020, 5:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಭಾನುವಾರ ಪೋಷಕರ ನಡುವಿನ ಜಗಳದಲ್ಲಿ ಮೂರು ವರ್ಷದ ಬಾಲಕಿ ಆಕೆಯ ತಂದೆಯಿಂದಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸೆಕ್ಟರ್ 49ನ ಪೊಲೀಸ್ ಠಾಣೆ ವ್ಯಾಪ್ತಿಯ ಬರೋಲಾ ಗ್ರಾಮದ ಮನೆಯಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ನಡೆದ ಘಟನೆಯಲ್ಲಿ ಜಗಳದ ವೇಳೆತಂದೆಯು ಬಾಲಕಿಯನ್ನು ಎತ್ತಿ ನೆಲಕ್ಕೆ ಬಿಸಾಡಿದ್ದಾನೆ. ಈ ವೇಳೆ ಆಕೆಯ ತಾಯಿಗೂ ಗಂಭೀರವಾಗಿ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಮಹಿಳೆಯು ಗಾಯಗೊಂಡಿದ್ದು, ಮಗು ಮೃತಪಟ್ಟಿರುವುದು ಕಂಡುಬಂದಿದೆ. ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರಣ್‌ವಿಜಯ್ ಸಿಂಗ್ ತಿಳಿಸಿದ್ದಾರೆ.

ADVERTISEMENT

ನೆರೆಹೊರೆಯವರು ಮತ್ತು ಸ್ಥಳೀಯರನ್ನು ವಿಚಾರಣೆ ನಡೆಸಿದಾಗ, ಆ ವ್ಯಕ್ತಿ ಮದ್ಯವ್ಯಸನಿಯಾಗಿದ್ದ ಮತ್ತು ಆಗಾಗ್ಗೆ ತನ್ನ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದನೆಂದು ತಿಳಿದುಬಂದಿದೆ. ನಿನ್ನೆ ಕೂಡ ಜನಳವಾಡಿದ್ದಾರೆ. ಈ ವೇಳೆ ಬಾಲಕಿಯು ಮೃತಪಟ್ಟಿದ್ದಾರೆ ಎಂದು ಹೇಳಿದರು.

ಆರೋಪಿಯನ್ನು ಅಮಿತ್ ಎಂದು ಗುರುತಿಸಲಾಗಿದ್ದು, ಬುಲಂದ್‌ಶಹರ್ ಜಿಲ್ಲೆಯ ಮೂಲದವನು. ನೋಯ್ಡಾದಲ್ಲಿ ಕೆಲಸ ಮಾಡುತ್ತಿದ್ದ ಆತ ತನ್ನ ಕುಟುಂಬದೊಂದಿಗೆ ವಾಸವಾಗಿದ್ದ. ಪ್ರಕರಣದ ಬಳಿಕ ಆತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಶೋಧಕಾರ್ಯ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.