ADVERTISEMENT

ಜಾರ್ಖಂಡ್: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಪಿಟಿಐ
Published 9 ನವೆಂಬರ್ 2020, 6:22 IST
Last Updated 9 ನವೆಂಬರ್ 2020, 6:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜೆಮ್‌ಶೆಡ್‌ಪುರ(ಜಾರ್ಖಂಡ್): ಇಲ್ಲಿನ ಪೂರ್ವ ಸಿಂಗ್ಭೂಮ್ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ.

ನ.4ರಂದು ಬಾಲಕಿಯ ಅತ್ಯಾಚರವೆಸಗಲಾಗಿದ್ದು, ಈ ಸಂಬಂಧ ಸಂತ್ರಸ್ತೆಯ ಪೋಷಕರು ಶನಿವಾರ ಸಂಜೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಲೋಕೊ ಕಾಲೊನಿಯಲ್ಲಿ ಬಾಲಕಿ ಆಟವಾಡುತ್ತಿದ್ದಾಗ ನೆರೆಮನೆಯವ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಆರೋಪಿ ಮತ್ತು ಆತನ ತಂದೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಾಲಕಿ ತಂದೆ ಊರಿನಲ್ಲಿ ಇರದಿದ್ದ ಕಾರಣ ಎಫ್‌ಐಆರ್‌ ದಾಖಲಿಸುವಾಗ ವಿಳಂಬವಾಗಿದೆ ಎಂದು ಪೋಷಕರು ಹೇಳಿದರು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.