ADVERTISEMENT

ಮೂರರ ಬಾಲಕಿ ಮೇಲೆ ಅತ್ಯಾಚಾರ

ಪಿಟಿಐ
Published 13 ಮೇ 2019, 18:43 IST
Last Updated 13 ಮೇ 2019, 18:43 IST
ಮೂರು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಶ್ರೀನಗರದಲ್ಲಿ ಸೋಮವಾರ ಪ್ರತಿಭಟನಾಕಾರರು ಭಿತ್ತಿಪತ್ರ ಪ್ರದರ್ಶಿಸಿದರು –ಪಿಟಿಐ ಚಿತ್ರ
ಮೂರು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಶ್ರೀನಗರದಲ್ಲಿ ಸೋಮವಾರ ಪ್ರತಿಭಟನಾಕಾರರು ಭಿತ್ತಿಪತ್ರ ಪ್ರದರ್ಶಿಸಿದರು –ಪಿಟಿಐ ಚಿತ್ರ   

ಶ್ರೀನಗರ: ಬಂಡಿಪೋರಾ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅಪ್ರಾಪ್ತನಲ್ಲ ಎಂದು ವೈದ್ಯಕೀಯ ಪರೀಕ್ಷೆಯಿಂದ ತಿಳಿದುಬಂದಿದೆ.

ಆರೋಪಿಸಂಭಲ್ ಪ್ರದೇಶದವನಾಗಿದ್ದು, ಈತನನ್ನು ಈಗಾಗಲೇ ಬಂಧಿಸಲಾಗಿದೆ.

‘ಆತನಿಗೆ ಅಂದಾಜು 20 ವರ್ಷ ಇರಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆರೋಪಿಯನ್ನು ವಯಸ್ಕ ಎಂದು ಪರಿಗಣಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

‘ಆರೋಪಿಯ ಜನ್ಮವರ್ಷ 2009 ಎಂದು ನಮೂದಿಸಿ ಜನನಪತ್ರ ನೀಡಿದ ಶಾಲೆಯ ಪ್ರಾಂಶುಪಾಲರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದ್ದಾರೆ.

ತ್ವರಿತಗತಿಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ವಿಭಾಗೀಯ ಪೊಲೀಸ್ ಆಯುಕ್ತ ಬಸೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

‘ಕಳೆದ ಬುಧವಾರ ಬಾಲಕಿಯ ನೆರೆಮನೆಯಾತ, ಆಮಿಷ ತೋರಿಸಿ ಆಕೆಯನ್ನು ಸಮೀಪದ ಶಾಲೆಗೆ ಕರೆದೊಯ್ದಿದ್ದ. ಅಲ್ಲಿ ಶೌಚಾಲಯದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ’ ಎಂದು ಪೊಲೀಸರು ಹೇಳಿದ್ದಾರೆ.

‘ಪ್ರಕರಣಆಘಾತಕಾರಿ’: ಬಂಡಿಪೋರಾಪ್ರಕರಣ ಕುರಿತು ಜಮ್ಮು–ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ಆಘಾತ ವ್ಯಕ್ತಪಡಿಸಿದ್ದಾರೆ.

‘ಪ್ರಕರಣ ಸಂಬಂಧ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕರಿಗೆ ಮಲಿಕ್ ನಿರ್ದೇಶಿಸಿದ್ದಾರೆ’ ಎಂದು ವಕ್ತಾರರು ತಿಳಿಸಿದ್ದಾರೆ.

ಪ್ರತಿಭಟನೆ: 40 ಭದ್ರತಾ ಸಿಬ್ಬಂದಿಗೆ ಗಾಯ

ಅತ್ಯಾಚಾರ ಪ್ರಕರಣ ಖಂಡಿಸಿ ಉತ್ತರ ಕಾಶ್ಮೀರದ ಹಲವು ಕಡೆಸೋಮವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಯುವಕರು ಕಲ್ಲು ತೂರಾಟನಡೆಸಿದ್ದು, ಏಳು ಮಂದಿ ಸಾರ್ವಜನಿಕರು ಹಾಗೂ ಭದ್ರತಾ ಪಡೆಯ 40ಕ್ಕೂ ಹೆಚ್ಚು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕಾರ್ಗಿಲ್‌ನಲ್ಲಿ ಸಾರ್ವಜನಿಕರು ರ್‍ಯಾಲಿ ನಡೆಸಿದ್ದು, ವಿದ್ಯಾರ್ಥಿಗಳು ಸಹ ಪಾಲ್ಗೊಂಡಿದ್ದರು.

ಸಂತ್ರಸ್ತ ಬಾಲಕಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ವಕೀಲರು ಕರ್ತವ್ಯದಿಂದ ದೂರ ಉಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.