ADVERTISEMENT

3 ವರ್ಷದ ಪದವಿ ಕೋರ್ಸ್‌ ತಕ್ಷಣಕ್ಕೆ ಸ್ಥಗಿತವಿಲ್ಲ: ಯುಜಿಸಿ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2022, 16:00 IST
Last Updated 14 ಡಿಸೆಂಬರ್ 2022, 16:00 IST
ಯುಜಿಸಿ
ಯುಜಿಸಿ   

ನವದೆಹಲಿ: ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ಮೂರು ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್‌ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಶ್ವವಿದ್ಯಾಲಯಗಳಿಗೆ ಮೂರು ಅಥವಾ ನಾಲ್ಕು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ. ನಾಲ್ಕು ವರ್ಷದ ಕೋರ್ಸ್‌ಗೆ ಸಂಬಂಧಿಸಿದಂತೆಹೊಸ ಪಠ್ಯಕ್ರಮದ ಚೌಕಟ್ಟನ್ನು ಸೋಮವಾರ ಘೋಷಿಸಲಾಗಿದೆ ಎಂದು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನಾಲ್ಕು ವರ್ಷಗಳ ಪದವಿಗಳನ್ನು ಹೊಂದಿರುವ ಅಭ್ಯರ್ಥಿಗಳು ನೇರವಾಗಿ ಪಿಎಚ್‌ಡಿಅನ್ನು ಮುಂದುವರಿಸಬಹುದು ಮತ್ತು ಅವರಿಗೆ ಸ್ನಾತಕೋತ್ತರ ಪದವಿಯ ಅಗತ್ಯವಿರುವುದಿಲ್ಲ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.