ADVERTISEMENT

ಒಡಿಶಾ: ಶಾಲೆಗಳಿಗೆ ಬಾರದ ಶೇ 30ರಷ್ಟು ವಿದ್ಯಾರ್ಥಿಗಳು

ಪಿಟಿಐ
Published 14 ಮೇ 2022, 15:33 IST
Last Updated 14 ಮೇ 2022, 15:33 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಭುವನೇಶ್ವರ, ಒಡಿಶಾ (ಪಿಟಿಐ): ಕೋವಿಡ್‌ ಸಾಂಕ್ರಾಮಿಕದ ಬಳಿಕ ಒಡಿಶಾದ ಶಾಲೆಗಳಲ್ಲಿ ಭೌತಿಕ ತರಗತಿಗಳು ಪುನರಾರಂಭವಾಗಿವೆ. ಆದರೆ, ಶೇಕಡ 30ರಷ್ಟು ವಿದ್ಯಾರ್ಥಿಗಳು ಶಾಲೆಗಳಿಗೆ ಬರುತ್ತಿಲ್ಲ.

‘ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ಎಲ್ಲಾ ಶಾಲೆಗಳ ದೈನಂದಿನ ಹಾಜರಾತಿಯ ಮಾಹಿತಿ ಪಡೆಯಲಾಗಿದ್ದು, ವಿಶ್ಲೇಷಣೆಯ ಪ್ರಕಾರ ಶೇಕಡ 70ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಉಳಿದ ಶೇಕಡ 30ರಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿಲ್ಲ’ ಎಂದು ಶಾಲಾ ಹಾಗೂ ಸಮೂಹ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಬಿ.ಪಿ. ಸೇಥಿ ಅವರು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಗೈರು ಹಾಜರಾಗುವ ವಿದ್ಯಾರ್ಥಿಗಳು ಏನು ಮಾಡುತ್ತಿದ್ದಾರೆ ಎಂಬುದನ್ನು ತಿಳಿಯಲು ವಿಶ್ಲೇಷಣೆ ಮಾಡಬೇಕಾಗಿದೆ. ವಿದ್ಯಾರ್ಥಿಗಳ ಪತ್ತೆಗೆಪಂಚಾಯತ್ ಸದಸ್ಯರು ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳನೆರವು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.