ADVERTISEMENT

ಮಳೆ ಸಂಬಂಧಿತ ಅವಘಡ | ತಮಿಳುನಾಡಿನಲ್ಲಿ 31 ಜನರು ಸಾವು: ನಿರ್ಮಲಾ ಸೀತಾರಾಮನ್

ಪಿಟಿಐ
Published 22 ಡಿಸೆಂಬರ್ 2023, 10:29 IST
Last Updated 22 ಡಿಸೆಂಬರ್ 2023, 10:29 IST
<div class="paragraphs"><p>ನಿರ್ಮಲಾ ಸೀತಾರಾಮನ್</p></div>

ನಿರ್ಮಲಾ ಸೀತಾರಾಮನ್

   

ನವದೆಹಲಿ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 31 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ನೆರೆ ಪರಿಹಾರಕ್ಕಾಗಿ ₹ 2ಸಾವಿರ ಕೋಟಿ ನೀಡುವಂತೆ ಮನವಿ ಸಲ್ಲಿಸಿದ್ದರು. ಈ ಹಣಕಾಸು ವರ್ಷದಲ್ಲಿ ತಮಿಳುನಾಡಿಗೆ ಕೇಂದ್ರ ಸರ್ಕಾರ ಈಗಾಗಲೇ ಎರಡು ಕಂತುಗಳಲ್ಲಿ ಒಟ್ಟು ₹900 ಕೋಟಿ ಬಿಡುಗಡೆ ಮಾಡಿದೆ ಎಂದರು.

ADVERTISEMENT

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ‌‌ಮೂರು ಡಾಪ್ಲರ್‌ಗಳು ಸೇರಿದಂತೆ ಅತ್ಯಾಧುನಿಕ ಸಾಧನಗಳನ್ನು ಹೊಂದಿದೆ. ಡಿಸೆಂಬರ್ 17ರಂದು ರಾಜ್ಯದ ನಾಲ್ಕು ಜಿಲ್ಲೆಗಳಾದ ತೆಂಕಾಶಿ, ಕನ್ಯಾಕುಮಾರಿ, ತಿರುನಲ್ವೇಲಿ ಹಾಗೂ ತೂತುಕುಡಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಡಿಸೆಂಬರ್ 12 ರಂದು ಮುನ್ಸೂಚನೆ ನೀಡಿತ್ತು ಎಂದು ಸೀತಾರಾಮನ್ ಹೇಳಿದರು.

ಇತ್ತ ತಮಿಳುನಾಡಿನಲ್ಲಿ ಭಾರಿ ಮಳೆ ಅನಾಹುತ ಸಂಭವಿಸಿದಾಗ, ಮುಖ್ಯಮಂತ್ರಿ ಎಂ. ಕೆ ಸ್ಟಾಲಿನ್ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದಲ್ಲಿದ್ದರು ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.