ನವದೆಹಲಿ: 2024ರ ಏಪ್ರಿಲ್‌ನಿಂದ 2025ರ ಮಾರ್ಚ್‌ವರೆಗೆ 1,16,323 ಔಷಧ ಮಾದರಿಗಳನ್ನು ಪರೀಕ್ಷಿಸಿದ್ದು, ಈ ಪೈಕಿ 3,104 ಔಷಧಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, 245 ನಕಲಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಂಗಳವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಔಷಧ ನಿಯಂತ್ರಣ ಸಂಸ್ಥೆಗಳಿಂದ ಪಡೆದ ಮಾಹಿತಿ ಪ್ರಕಾರ, ನಕಲಿ/ಕಲಬೆರಕೆ ಔಷಧಗಳ ತಯಾರಿಕೆ, ಮಾರಾಟ ಹಾಗೂ ವಿತರಣೆಗೆ ಸಂಬಂಧಿಸಿದಂತೆ 961 ಪ್ರಕರಣಗಳಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದಿದ್ದಾರೆ.
‘2023ರ ಏಪ್ರಿಲ್‌ನಿಂದ 2024ರ ಮಾರ್ಚ್‌ವರೆಗೆ 1,06,150 ಔಷಧ ಮಾದರಿಗಳ ಪರೀಕ್ಷೆ ನಡೆಸಿದ್ದು, 2,988 ನಿಗದಿತ ಗುಣಮಟ್ಟ ಹೊಂದಿಲ್ಲ. 282 ಔಷಧಗಳು ಕಳಪೆಯಾಗಿವೆ. ಇದೇ ಅವಧಿಯಲ್ಲಿ 604 ಪ್ರಕರಣಗಳಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.
ನಕಲಿ, ಕಲಬೆರಕೆ ಹಾಗೂ ಕಳಪೆ ಗುಣಮಟ್ಟದ ಔಷಧಗಳ ತಯಾರಿಕೆಯು ಔಷಧ ಮತ್ತು ಸೌಂದರ್ಯವರ್ಧಕ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅಧಿಕಾರವಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.