(ಪಿಟಿಐ ಚಿತ್ರ)
ನವದೆಹಲಿ: 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸೋಮವಾರ ತಿಳಿಸಿದೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ತಲೆದೋರಿದ್ದ ಉದ್ವಿಗ್ನತೆಯಿಂದಾಗಿ ಸುರಕ್ಷತೆ ದೃಷ್ಟಿಯಿಂದ ದೇಶದ 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಮೇ 15ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಶನಿವಾರದಂದು ಭಾರತ ಮತ್ತು ಪಾಕಿಸ್ತಾನವು ಎಲ್ಲಾ ರೀತಿಯ ಸೇನಾ ಕಾರ್ಯಾಚರಣೆಯನ್ನು ತಕ್ಷಣದಿಂದಲೇ ನಿಲ್ಲಿಸಲಾಗುವುದು ಎಂದು ಹೇಳಿವೆ. ಹೀಗಾಗಿ ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಮತ್ತೆ ಆರಂಭವಾಗುತ್ತಿದೆ.
ಈ ಎಲ್ಲಾ ವಿಮಾನ ನಿಲ್ದಾಣಗಳು ತಕ್ಷಣದಿಂದಲೇ ಕಾರ್ಯಾಚರಣೆಗೆ ಲಭ್ಯವಿದೆ. ಪ್ರಯಾಣಿಕರು, ತಮ್ಮ ವಿಮಾನದ ಸ್ಥಿತಿಗತಿ ಮತ್ತು ಕಾರ್ಯಾಚರಣೆಯ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.