ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ 32.31 ಲಕ್ಷ ಜನರಿಗೆ ನಿವಾಸಿ ಪ್ರಮಾಣಪತ್ರ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2021, 11:18 IST
Last Updated 16 ಮಾರ್ಚ್ 2021, 11:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 32.31 ಲಕ್ಷ ಜನರಿಗೆ ನಿವಾಸಿ ಪ್ರಮಾಣಪತ್ರ ನೀಡಲಾಗಿದ್ದು, 2.15 ಲಕ್ಷ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಮಂಗಳವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ2020ರ ಡಿಸೆಂಬರ್ 31ರ ವೇಳೆಗೆ ಒಟ್ಟು 35,44,938 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 32,31,353 ಅರ್ಜಿದಾರರಿಗೆ ನಿವಾಸಿ ಪ್ರಮಾಣಪತ್ರಗಳನ್ನು ನೀಡಲಾಗಿದೆ. ಒಟ್ಟು 2,15,438 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಅವರು ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

2020ರ ಜಮ್ಮು ಮತ್ತು ಕಾಶ್ಮೀರ ಧನಸಹಾಯ (ಕಾರ್ಯವಿಧಾನ) ನಿಯಮಗಳಲ್ಲಿ ನಿಯಮ 5ರಡಿ ಅರ್ಜಿಯ ಜತೆಗೆ ಕೆಲವು ದಾಖಲೆಗಳನ್ನು ಲಗತ್ತಿಸಬೇಕೆಂಬ ಆದೇಶವಿದೆ. ನಿಗದಿತ ದಾಖಲೆಗಳನ್ನು ಸಲ್ಲಿಸದಿರುವ ಅರ್ಜಿದಾರರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.