
ಪಿಟಿಐ
ದಾಂತೇವಾಡ: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಭಾನುವಾರ ಒಟ್ಟು 35 ನಕ್ಸಲರು ಶರಣಾಗಿದ್ದಾರೆ. ಶರಣಾದ ನಕ್ಸಲರ ಪೈಕಿ ಮೂವರ ಪತ್ತೆಗೆ ಸುಳಿವು ನೀಡಿದವರಿಗೆ ತಲಾ ₹3 ಲಕ್ಷ ಹಾಗೂ ಮಹಿಳೆಯೊಬ್ಬರ ಬಗ್ಗೆ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶರಣಾದವರಲ್ಲಿ 16 ವರ್ಷದ ಬಾಲಕಿ ಮತ್ತು 18 ವರ್ಷದ ಬಾಲಕನೂ ಸೇರಿದ್ದಾನೆ. ಶರಣಾದ ನಕ್ಸಲರಿಗೆ ಸರ್ಕಾರದ ಶರಣಾಗತಿ ಮತ್ತು ಪುನರ್ ವಸತಿ ನೀತಿಯ ಪ್ರಕಾರ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.