ಮುಂಬೈ: ಮುಂಬೈ ಮೂಲದ 35 ವರ್ಷದ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಂಬೈನ ಒಳಾಂಗಣ ವಿನ್ಯಾಸಕಾರರೊಬ್ಬರ (ಇಂಟೀರಿಯರ್ ಡಿಸೈನರ್) ವಿರುದ್ಧ ಪ್ರಕರಣ ದಾಖಲಾಗಿದೆ.
ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಒಳಾಂಗಣ ವಿನ್ಯಾಸಕಾರನಿಗೂ ನಟಿಗೂ ಮೊದಲು ಜಗಳವಾಗಿದೆ. ನಂತರ ವ್ಯಕ್ತಿಯು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ನಟಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಓಶಿವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಈ ವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.