ADVERTISEMENT

ಕಾನ್ಪುರದಲ್ಲಿ ಹಿಂಸಾಚಾರ, ಕಲ್ಲು ತೂರಾಟ: 36 ಗಲಭೆಕೋರರ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜೂನ್ 2022, 7:54 IST
Last Updated 4 ಜೂನ್ 2022, 7:54 IST
ಕಾನ್ಪುರ
ಕಾನ್ಪುರ   

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೂ 36 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಡಿಯೊ ದೃಶ್ಯಾವಳಿಗಳನ್ನು ಜಾಲಾಡಿದ ಬಳಿಕ ಗಲಭೆಕೋರರನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸ್ ಆಯುಕ್ತ ವಿಜಯ್ ಸಿಂಗ್ ಮೀನಾ ತಿಳಿಸಿದ್ದಾರೆ.

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ADVERTISEMENT

ಇತ್ತೀಚೆಗೆ ಟಿ.ವಿ ಸಂವಾದದಲ್ಲಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಾಗಿ ಆರೋಪಿಸಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಶುಕ್ರವಾರ ಕಾನ್ಪುರದ ವಿವಿಧ ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.