ನವದೆಹಲಿ (ಪಿಟಿಐ): ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡುವಂತೆ ಕಾಶ್ಮೀರಿ ಪಂಡಿತರ ನಿಯೋಗ ಶುಕ್ರವಾರ ರಾಷ್ಟ್ರಪತಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಜಮ್ಮು-ಕಾಶ್ಮೀರಕ್ಕೆ ನೀಡುತ್ತಿರುವ ವಿಶೇಷ ಸ್ಥಾನಮಾನವನ್ನು ರದ್ದು ಮಾಡುವಂತೆ ಕೋರಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂಧಾನಕಾರರು ಸಿದ್ಧಪಡಿಸಿದ ವರದಿಯನ್ನು ಕಾಶ್ಮೀರಿ ಪಂಡಿತರು ಟೀಕಿಸಿದ್ದಾರೆ.
ಸಂಧಾನಕಾರರು ನೀಡಿರುವ ವರದಿಯಲ್ಲಿ ಕಾಶ್ಮೀರಿ ಪಂಡಿತರಿಗೆ ಯಾವುದೇ ರೀತಿಯ ಮಹತ್ವವನ್ನು ನೀಡಿಲ್ಲ ಎಂದು ರಾಷ್ಟ್ರಪತಿ ಅವರಿಗೆ ನೀಡಿರುವ ಮನವಿಯಲ್ಲಿ ತಿಳಿಸಿರುವ ನಿಯೋಗ, ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.