ADVERTISEMENT

India Covid-19 Update: ಹೊಸದಾಗಿ 37,875 ಪ್ರಕರಣ, 369 ಜನ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಸೆಪ್ಟೆಂಬರ್ 2021, 5:50 IST
Last Updated 8 ಸೆಪ್ಟೆಂಬರ್ 2021, 5:50 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಲ್ಲಿಂದು 37,875 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3,30,96,718 ಕ್ಕೆ ತಲುಪಿದೆ ಎಂದು ಬುಧವಾರ ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ಸಕ್ರಿಯ ಪ್ರಕರಣಗಳು 3,91,256 ಕ್ಕೆ ಇಳಿದಿದ್ದು, ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 1.18 ರಷ್ಟಿದ್ದೆ. ರಾಷ್ಟ್ರೀಯ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97.48ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ 369 ಜನರು ಮೃತಪಡುವುದರೊಂದಿಗೆ ಸಾವಿನ ಸಂಖ್ಯೆ 4,41,411ಕ್ಕೆ ಏರಿಕೆಯಾಗಿದೆ.

ADVERTISEMENT

ದಿನದ ಪಾಸಿಟಿವಿಟಿ ದರ ಶೇ 2.16 ರಷ್ಟು ದಾಖಲಿಸಲಾಗಿದೆ. ಕಳೆದ ಒಂಬತ್ತು ದಿನಗಳಿಂದ ಇದು ಶೇಕಡಾ ಮೂರಕ್ಕಿಂತ ಕಡಿಮೆ ಇದೆ. ವಾರದ ಪಾಸಿಟಿವಿಡಿ ದರವು ಶೇ 2.49ರಷ್ಟು ದಾಖಲಾಗಿದ್ದು, ಕಳೆದ 75 ದಿನಗಳಿಂದ ಇದು ಶೇ ಮೂರರಷ್ಟು ಕಡಿಮೆಯಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,22,64,051ಕ್ಕೆ ಏರಿದೆ ಎಂದು ಸಚಿವಾಲಯ ತಿಳಿಸಿದೆ.

ಸಚಿವಾಲಯದ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ಈವರೆಗೆ 70.75 ಕೋಟಿ ಡೋಸ್‌ ಅನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.