ADVERTISEMENT

ದೆಹಲಿ ಹಿಂಸಾಚಾರ: 38 ಮಂದಿ ವಿರುದ್ಧ ಪ್ರಕರಣ ದಾಖಲು

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಲೋಕಸಭೆಗೆ ಮಾಹಿತಿ

ಪಿಟಿಐ
Published 10 ಮಾರ್ಚ್ 2021, 10:06 IST
Last Updated 10 ಮಾರ್ಚ್ 2021, 10:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಗಣರಾಜ್ಯೋತ್ಸವ ದಿನದಂದು ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇದುವರೆಗೆ ವಿದೇಶಿಯರೂ ಸೇರಿದಂತೆ 38 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ. ಕೃಷ್ಣಾರೆಡ್ಡಿ ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಕೇಳಿದ ಪ್ರಶ್ನೆಯೊಂದಿಗೆ ಪ್ರತಿಕ್ರಿಯಿಸಿದ ಸಚಿವರು, ‘ಕೃಷಿ ಕಾಯ್ದೆಗಳನ್ನು ವಿರೋಧಿಸಿ, ದೆಹಲಿಯಲ್ಲಿ ರೈತರು ನಡೆಸಿದ ಪ್ರತಿಭಟನೆ ವೇಳೆ ಸೈಬರ್ ಅಪರಾಧ ಸೇರಿದಂತೆ ವಿವಿಧ ರೀತಿಯ ಕಾನೂನು ಉಲ್ಲಂಘಿಸಿದ 38 ಮಂದಿ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ’ ಎಂದರು.

‘ಪ್ರತಿಭಟನಾಕಾರರನ್ನು ನಿಯಂತ್ರಿಸಲು ದೆಹಲಿ ಗಡಿ ಭಾಗಗಳ ರಸ್ತೆಗಳಲ್ಲಿ ಗುಂಡಿಗಳನ್ನು ತೆಗೆದಿರಲಿಲ್ಲ. ಬದಲಿಗೆ ಭದ್ರತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿತ್ತು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.ರೈತ ಸಂಘಟನೆಗಳು ಒಪ್ಪಿತ ಮಾರ್ಗದಲ್ಲಿ ಟ್ರ್ಯಾಕ್ಟರ್ ಪೆರೇಡ್ ಮಾಡಲು ನೀಡಿದ್ದ ಅನುಮತಿ ಉಲ್ಲಂಘಿಸಿವೆ, ಸಂಯುಕ್ತ ಕಿಸಾನ್ ಮೋರ್ಚಾ ಸದಸ್ಯರು ಬ್ಯಾರಿಕೇಡ್‌ಗಳನ್ನು ಮುರಿದಿದ್ದಾರೆ‘ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.