ADVERTISEMENT

ಟಿಎಂಸಿಯ 38 ಶಾಸಕರು ಬಿಜೆಪಿ ಸಂಪರ್ಕದಲ್ಲಿ: ನಟ ಮಿಥುನ್‌ ಚಕ್ರವರ್ತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜುಲೈ 2022, 11:40 IST
Last Updated 27 ಜುಲೈ 2022, 11:40 IST
ಮಿಥುನ್‌ ಚಕ್ರವರ್ತಿ
ಮಿಥುನ್‌ ಚಕ್ರವರ್ತಿ   

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಆಪರೇಷನ್‌ ಕಮಲ ನಡೆಯುವ ಸಾಧ್ಯತೆಗಳಿವೆ ಎಂದು ಕೆಲವು ದಿನಗಳ ಹಿಂದೆ ಮಾಧ್ಯಮಗಳಲ್ಲಿ ಸುದ್ದಿಗಳು ಹರಿದಾಡಿದ್ದವು.

ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ನಾಯಕ ಹಾಗೂ ನಟ ಮಿಥುನ್‌ ಚಕ್ರವರ್ತಿ, ನಮ್ಮೊಂದಿಗೆ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ 38 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇಂಡಿಯಾ ಟುಡೆ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ನಾನು ನಿಮಗೆ ಬ್ರೇಕಿಂಗ್‌ನ್ಯೂಸ್‌ ನೀಡುವ ಸಮಯ ಬಂದಿದೆ. ಟಿಎಂಸಿಯ 38 ಶಾಸಕರು ನಮ್ಮ ಸಂಪರ್ಕದಲ್ಲಿದ್ದು, 21 ಶಾಸಕರು ನೇರ ಸಂಪರ್ಕದಲ್ಲಿದ್ದಾರೆ ಎಂದುಹೇಳಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.