ADVERTISEMENT

ಒಂದೂ ಡೋಸ್‌ ಪಡೆಯದ ನಾಲ್ಕು ಕೋಟಿ ಮಂದಿ

​ಪ್ರಜಾವಾಣಿ ವಾರ್ತೆ
Published 22 ಜುಲೈ 2022, 14:41 IST
Last Updated 22 ಜುಲೈ 2022, 14:41 IST
   

ನವದೆಹಲಿ: ಅಂದಾಜು ನಾಲ್ಕು ಕೋಟಿ ಅರ್ಹ ಫಲಾನುಭವಿಗಳು ಜುಲೈ 18ರವರೆಗೆ ಕೋವಿಡ್‌ ಲಸಿಕೆಯ ಒಂದೂ ಡೋಸ್‌ ಪಡೆದುಕೊಂಡಿಲ್ಲ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್‌‍ಪವಾರ ಲೋಕಸಭೆಗೆ ಶುಕ್ರವಾರ ತಿಳಿಸಿದರು.

ಸರ್ಕಾರಿ ಕೋವಿಡ್ ಲಸಿಕಾ ಕೇಂದ್ರಗಳಿಗೆ (ಸಿವಿಸಿ) 1,78,38,52,566 ಲಸಿಕೆ ಡೋಸ್‌ಗಳನ್ನು ಜುಲೈ 18ರವರೆಗೆ ಉಚಿತವಾಗಿ ನೀಡಲಾಗಿದೆ ಎಂದು ಲಿಖಿತ ಉತ್ತರ ನೀಡಿದ್ದಾರೆ.

ಪ್ರಸಕ್ತ ವರ್ಷ ಮಾರ್ಚ್ 16ರಿಂದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಫಲಾನುಭವಿಗಳಿಗೆ ಹಾಗೂ ಖಾಸಗಿ ಲಸಿಕಾ ಕೇಂದ್ರಗಳಲ್ಲಿಏಪ್ರಿಲ್ 10 ರಿಂದ 18-59 ವರ್ಷದೊಳಗಿನವರಿಗೆ ಮುನ್ನೆಚ್ಚರಿಕೆ ಡೋಸ್‌ಲಭ್ಯವಿದೆ.

ADVERTISEMENT

ಜುಲೈ 15 ರಿಂದ ಸಿವಿಸಿಗಳಲ್ಲಿ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮುನ್ನೆಚ್ಚರಿಕೆ ಡೋಸ್‌ ನೀಡಲು 75 ದಿನಗಳ ವಿಶೇಷ ಅಭಿಯಾನ ಪ್ರಾರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.