ADVERTISEMENT

ದೆಹಲಿಯ ಖಾಸಗಿ ಶಾಲೆಗಳ 4 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ: ಕೇಜ್ರಿವಾಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಏಪ್ರಿಲ್ 2022, 11:21 IST
Last Updated 21 ಏಪ್ರಿಲ್ 2022, 11:21 IST
ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಎಎಪಿ– ರೈತರ ಬೃಹತ್‌ ಸಮಾವೇಶದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌, ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌, ಎಎಪಿ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ.

ಬೆಂಗಳೂರು: ದೆಹಲಿಯಲ್ಲಿ ಈ ವರ್ಷ ಖಾಸಗಿ ಶಾಲೆಗಳನ್ನು ತೊರೆದು 4 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ರ ಕೇಜ್ರಿವಾಲ್‌ ಹೇಳಿದ್ದಾರೆ.

ನಗರದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ರೈತರ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು, ‘ದೆಹಲಿಯಲ್ಲಿ ಐದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳನ್ನು ಬದಲಾಯಿಸಿದ್ದೇವೆ. ಈ ವರ್ಷ ನಾಲ್ಕು ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆಗಳನ್ನು ತೊರೆದು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ. ದೆಹಲಿಯಲ್ಲಿ ಆಸ್ಪತ್ರೆಗಳ ಪರಿಸ್ಥಿತಿಯೂ ಹದಗೆಟ್ಟಿತ್ತು. ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ದೆಹಲಿಯ 2 ಕೋಟಿ ಜನರಿಗೆ, ಎಲ್ಲ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿದ್ದೇವೆ’ ಎಂದು ವಿವರಿಸಿದರು.

ಈ ಹಿಂದೆ ದಿನಕ್ಕೆ 8 ಗಂಟೆಗಳ ಕಾಲ ವಿದ್ಯುತ್‌ ಕಡಿತ ಮಾಡಲಾಗುತ್ತಿತ್ತು. ಈಗ 24 ಗಂಟೆ ಉಚಿತವಾಗಿ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ ಎಂದು ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.