ADVERTISEMENT

ಕೊರೊನಾ ವೈರಸ್‌ ಸೋಂಕಿತ 4 ತಿಂಗಳ ಮಗು ಗುಣಮುಖ

ಏಜೆನ್ಸೀಸ್
Published 13 ಜೂನ್ 2020, 2:10 IST
Last Updated 13 ಜೂನ್ 2020, 2:10 IST
ಗುಣಮುಖವಾದ ಮಗು
ಗುಣಮುಖವಾದ ಮಗು   

ವಿಶಾಖಪಟ್ಟಣ (ಆಂಧ್ರಪ್ರದೇಶ): ಕೋವಿಡ್‌–19 ಸೋಂಕಿನಿಂದಾಗಿ ಕಳೆದ 18 ದಿನಗಳಿಂದ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ತಿಂಗಳ ಮಗು ಸಂಪೂರ್ಣವಾಗಿ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ.

ಕೋವಿಡ್‌ ಸೋಂಕಿನಿಂದ ಗುಣಮುಖವಾದ ಮಗುವನ್ನು ಶುಕ್ರವಾರ ಸಂಜೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿನಯ್ ಚಂದ್ ತಿಳಿಸಿದ್ದಾರೆ.

ಪೂರ್ವ ಗೋದಾವರಿ ಜಿಲ್ಲೆಯ ಬುಡಕಟ್ಟು ಮಹಿಳೆಗೆ ಕೊರೊನಾ ವೈರಸ್‌ ಪಾಸಿಟಿವ್‌ ಬಂದಿತ್ತು. ಬಳಿಕ ಆಕೆಯ ಮಗುವನ್ನು ಪರೀಕ್ಷಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ADVERTISEMENT

ಮೇ 25ರಂದು ಮಗುವನ್ನು ಪೂರ್ವ ಗೋದಾವರಿ ಜಿಲ್ಲಾ ಆಸ್ಪತ್ರೆಯಿಂದ ವಿಶಾಖಪಟ್ಟಣದ ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ 18 ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಇತ್ತೀಚೆಗೆ ಮತ್ತೊಮ್ಮೆ ಪರೀಕ್ಷೆ ನಡೆಸಿದಾಗ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಹಲವು ಬಾರಿ ಆರೋಗ್ಯ ತಪಾಸಣೆ ನಡೆಸಿದ ಬಳಿಕ ವಿಮ್ಸ್ ವೈದ್ಯರು ಶುಕ್ರವಾರ ಸಂಜೆ ಮಗುವನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದಾರೆ ಎಂದು ವಿನಯ್ ಚಂದ್ ಮಾಹಿತಿ ನೀಡಿದ್ದಾರೆ.

ವಿಶಾಖಪಟ್ಟಣದಲ್ಲಿ ಒಟ್ಟು 252 ಕೊರೊನಾ ವೈರಸ್‌ ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.