ADVERTISEMENT

ದೆಹಲಿ: 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಚಾಕುವಿನಿಂದ ಇರಿತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಡಿಸೆಂಬರ್ 2021, 6:32 IST
Last Updated 12 ಡಿಸೆಂಬರ್ 2021, 6:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಶಾಲಾ ಆವರಣದ ಹೊರಗಡೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದಿರುವ ಘಟನೆ ಪೂರ್ವ ದೆಹಲಿಯಲ್ಲಿ ಶನಿವಾರ ನಡೆದಿದೆ.

ಈ ಕುರಿತು ಎನ್‌ಡಿಟಿವಿ ವರದಿ ಮಾಡಿದೆ. ಪೂರ್ವ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿರುವ ಸರ್ವೋದಯ ಬಾಲ ವಿದ್ಯಾಲಯದಲ್ಲಿ 10ನೇ ತರಗತಿಯ ಪರೀಕ್ಷೆ ಮುಗಿಸಿ ಶಾಲಾ ಆವರಣದಿಂದ ಹೊರಬರುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೇರೆ ಶಾಲೆಯ ವಿದ್ಯಾರ್ಥಿಗಳ ಗುಂಪೊಂದು ಅಟ್ಟಾಡಿಸಿಕೊಂಡು ಚಾಕುವಿನಿಂದ ಇರಿದು ಗಾಯಗೊಳಿಸಿದೆ.

ಗಾಯಾಳುಗಳನ್ನು ಗೌತಮ್, ರೆಹನ್, ಫೈಜಾನ್ ಮತ್ತು ಆಯುಷ್ ಎಂದು ಗುರುತಿಸಲಾಗಿದೆ. ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ತ್ರಿಲೋಕಪುರಿಯ ಶಾಲಾ ವಿದ್ಯಾರ್ಥಿಗಳಾದ ಅವರೆಲ್ಲರು ಸರ್ವೋದಯ ಬಾಲ ವಿದ್ಯಾಲಯದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದರು.

ಗಾಯಾಳು ವಿದ್ಯಾರ್ಥಿಗಳನ್ನು ದೆಹಲಿಯ ಬಾಲ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆಗೆ ಸಾಕಷ್ಟು ರಕ್ತಸ್ರಾವ ಆಗಿತ್ತು. ಈ ಪೈಕಿ ಓರ್ವ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿದೆ.

ADVERTISEMENT

ಪಾಂಡವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.