ಇಂಫಾಲ್: ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದರಿಂದ ಮಣಿಪುರದ ಚುರಾಚಾಂದಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಸೋಮವಾರ ಸಾವನ್ನಪ್ಪಿದ್ದಾರೆ.
ಅತ್ಯಂತ ಸಮೀಪದಿಂದ ಗುಂಡು ಹಾರಿಸಿದ್ದು, ಸ್ಥಳದಲ್ಲಿ 12 ಖಾಲಿ ಗುಂಡುಗಳ ಸಿಡಿತಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಈವರೆಗೆ ಯಾವುದೇ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಸ್ಥಳದಲ್ಲಿ ಹೆಚ್ಚುವರಿ ಭದ್ರತೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.