ಪಟ್ನಾ: ಮತದಾನ ಮಾಡುವ ವೇಳೆ ಇವಿಎಂ ಜತೆಗೆ ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಬಿಹಾರದಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಮೊದಲ ಹಂತದಲ್ಲಿ ಮತದಾನ ನಡೆದ ಆರಾ, ಗೋಪಾಲ್‌ಗಂಜ್ ಮತ್ತು ಸರನ್‌ನಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗೋಪಾಲ್‌ಗಂಜ್‌ನಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದರೆ, ಆರಾ ಮತ್ತು ಸರನ್‌ನಲ್ಲಿ ತಲಾ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.
ಮತದಾನದ ವೇಳೆ ಇವಿಎಂಗಳೊಂದಿಗೆ ಫೋಟೊಗಳನ್ನು ಕ್ಲಿಕ್ಕಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದು ಮಾದರಿ ನೀತಿ ಸಂಹಿತೆ ಮತ್ತು ಕಾನೂನಿನ ಇತರ ನಿಬಂಧನೆಗಳನ್ನು ಉಲ್ಲಂಘನೆಯಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತಗಟ್ಟೆಗಳಿಗೆ ಮೊಬೈಲ್‌ಗಳನ್ನು ತೆಗೆದುಕೊಂಡು ಹೋಗುವುದಕ್ಕೆ ಆರೋಪಿಗಳಿಗೆ ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಬಿಹಾರ 243 ಕ್ಷೇತ್ರಗಳ ಪೈಕಿ 121 ಕ್ಷೇತ್ರಗಳಿಗೆ ನವೆಂಬರ್ 6ರಂದು ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನುಳಿದ ಕ್ಷೇತ್ರಗಳಿಗೆ ನವೆಂಬರ್ 11ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.