ADVERTISEMENT

ಲೋಕಾಯುಕ್ತ ದಾಳಿ: ಕಾನ್‌ಸ್ಟೆಬಲ್ ಮನೆಯಲ್ಲಿ 40 KG ಬೆಳ್ಳಿ, ಕಂತೆ ಕಂತೆ ಹಣ ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಡಿಸೆಂಬರ್ 2024, 6:52 IST
Last Updated 21 ಡಿಸೆಂಬರ್ 2024, 6:52 IST
<div class="paragraphs"><p>ಲೋಕಾಯುಕ್ತ ದಾಳಿ ವೇಳೆ ಪತ್ತೆಯಾಗಿರುವ ನಗದು</p></div>

ಲೋಕಾಯುಕ್ತ ದಾಳಿ ವೇಳೆ ಪತ್ತೆಯಾಗಿರುವ ನಗದು

   

Credit: X/@ANI

ಭೋಪಾಲ್‌: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಆದಾಯ ಮೀರಿದ ಆಸ್ತಿ ಸಂಪಾದಿಸಿದ ಆರೋಪದಡಿಯಲ್ಲಿ ಸಾರಿಗೆ ಇಲಾಖೆಯ ಮಾಜಿ ಕಾನ್‌ಸ್ಟೆಬಲ್‌ವೊಬ್ಬರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.

ADVERTISEMENT

ದಾಳಿಯ ವೇಳೆ 40 ಕೆ.ಜಿ ಬೆಳ್ಳಿಯ ಗಟ್ಟಿ ಹಾಗೂ ₹200 ಮೂಖಬೆಲೆ ನೋಟುಗಳ ಬಂಡಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಲೋಕಾಯುಕ್ತ ಪೊಲೀಸರು ಗುರುವಾರವೂ ಮಧ್ಯಪ್ರದೇಶ ಸಾರಿಗೆ ಇಲಾಖೆಯ ಮಾಜಿ ಕಾನ್‌ಸ್ಟೆಬಲ್‌ವೊಬ್ಬರ ಮನೆ ಮೇಲೆ ದಾಳಿ ನಡೆಸಿ ₹2.85 ಕೋಟಿ ನಗದು ಸೇರಿದಂತೆ 3 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದರು.

ನಗದು ಜತೆಗೆ ₹50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.