
ಸಾಂದರ್ಭಿಕ ಚಿತ್ರ
ನಾಸಿಕ್: ‘ನಗದು ಸಾಗಿಸುತ್ತಿದ್ದ ಟ್ರಕ್ ತಡೆದು ₹400 ಕೋಟಿ ದೋಚಿ ಪರಾರಿಯಾಗಿದ್ದಾರೆ ಎಂದು ಚಾಲಕನೊಬ್ಬ ಸಲ್ಲಿಸಿದ್ದ ದೂರು ಸುಳ್ಳು, ಅಂತಹ ಯಾವುದೇ ಪ್ರಕರಣ ನಡೆದಿಲ್ಲ’ ಎಂದು ಮಹಾರಾಷ್ಟ್ರದ ನಾಸಿಕ್ ಗ್ರಾಮೀಣ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಚಲಿಸುತ್ತಿದ್ದ ಟ್ರಕ್ ಅನ್ನು ಅಡ್ಡಹಾಕಿದ 7 ಮಂದಿ ಅನಾಮಿಕರು, ನನ್ನ ಮೇಲೆ ಹಲ್ಲೆ ಮಾಡಿ ಟ್ರಕ್‌ನಲ್ಲಿದ್ದ ₹400 ಕೋಟಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಟ್ರಕ್ ಚಾಲಕ ಸಂದೀಪ್ ಪಾಟೀಲ್ ದೂರು ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಎಲ್ಲಾ 7 ಆರೋಪಿಗಳನ್ನು ಇಗತ್ಪುರಿ ನ್ಯಾಯಾಲಯ ಬಿಡುಗಡೆ ಮಾಡಿದೆ ಮತ್ತು ನಕಲಿ ದೂರು ನೀಡಿದ್ದಕ್ಕಾಗಿ ಟ್ರಕ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2025ರ ಅಕ್ಟೋಬರ್ 22ರಂದು 7 ಜನರು ತಮ್ಮನ್ನು ದಾರಿ ತಪ್ಪಿಸಿ, ಅಪಹರಿಸಿ, ಹಲ್ಲೆ ನಡೆಸಿದ್ದಾರೆ. ಬಳಿಕ ಟ್ರಕ್‌ನಲ್ಲಿದ್ದ ₹400 ಕೋಟಿ ಮೌಲ್ಯದ ರದ್ದಾದ ₹2000 ಮುಖಬೆಲೆಯ ನೋಟುಗಳನ್ನು ಲೂಟಿ ಮಾಡಿದ್ದಾರೆ ಎಂದು ಚಾಲಕ ಸಂದೀಪ್ ಪಾಟೀಲ್ ಘೋಟಿ ಪೊಲೀಸರಿಗೆ ದೂರು ನೀಡಿದ್ದರು.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹಂಚಿಕೊಂಡಿದ್ದ ಪಾಟೀಲ್, ‘ಟ್ರಕ್‌ನಲ್ಲಿ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹವಾಲಾ ಹಣ ಸಾಗಿಸಲಾಗುತ್ತಿತ್ತು’ ಎಂದು ಹೇಳಿಕೊಂಡಿದ್ದರು.
‘ಪಾಟೀಲ್ ಅವರು ಆರೋಪಿಸಿದ್ದ 7 ಜನರನ್ನು ನಾವು ಬಂಧಿಸಿದ್ದೇವೆ. ಆದರೆ, ತನಿಖೆಯಲ್ಲಿ ಪಾಟೀಲ್ ಅವರು ಹೇಳಿದಂತೆ ಆರೋಪಿಗಳ ಸಂಚಾರದ ಮಾರ್ಗ, ಕರೆ ದಾಖಲೆಗಳು, ಸಮಯ ಇತ್ಯಾದಿಗಳು ಹೋಲಿಕೆಯಾಗಿಲ್ಲ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.₹₹
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.