ADVERTISEMENT

ಉತ್ತರಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

ಪಿಟಿಐ
Published 8 ಜನವರಿ 2021, 8:19 IST
Last Updated 8 ಜನವರಿ 2021, 8:19 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಅಮೇಥಿ (ಉತ್ತರಪ್ರದೇಶ): ದಲಿತ ಸಮುದಾಯದ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ 42 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.

ಈ ಘಟನೆಶುಕುಲ್ ಬಜಾರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.

‘ಪಕ್ಕದ ಗ್ರಾಮದ ವ್ಯಕ್ತಿ ತನ್ನ ಮಗಳ ಮೇಲೆ ಬುಧವಾರ ಸಂಜೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ಶಕುಲ್‌ ರವೀಂದ್ರ ಸಿಂಗ್‌ ಅವರು ಹೇಳಿದ್ದಾರೆ.

ADVERTISEMENT

‘ಈ ಸಂಬಂಧಎಸ್‌ಸಿ–ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.