ADVERTISEMENT

ಜಲಗಾಂವ್: ಜನನ ಪ್ರಮಾಣ ಪತ್ರ ವಿತರಣೆಯಲ್ಲಿ ಅಕ್ರಮ ಆರೋಪ; 43 ಜನರ ವಿರುದ್ಧ ಪ್ರಕರಣ

ಪಿಟಿಐ
Published 6 ಏಪ್ರಿಲ್ 2025, 2:24 IST
Last Updated 6 ಏಪ್ರಿಲ್ 2025, 2:24 IST
<div class="paragraphs"><p>ಎಫ್‌ಐಆರ್‌</p></div>

ಎಫ್‌ಐಆರ್‌

   

ಮುಂಬೈ: ಮಹಾರಾಷ್ಟ್ರದ ಜಲಗಾಂವ್‌ ಮುನ್ಸಿಪಲ್‌ ಕಾರ್ಪೊರೇಷನ್‌ ವಿತರಿಸಿರುವ ಜನನ ಪ್ರಮಾಣ ಪತ್ರಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ 43 ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನನ ಪ್ರಮಾಣ ಪತ್ರಗಳ ವಿತರಣೆಯಲ್ಲಿನ ಅಕ್ರಮಗಳ ಕುರಿತು ಬಿಜೆಪಿ ಮಾಜಿ ಸಂಸದ ಕಿರೀಟ್‌ ಸೋಮಯ್ಯ ದೂರು ನೀಡಿದ್ದಾರೆ. ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಮತ್ತು ರೋಹಿಂಗ್ಯಾಗಳಿಗೆ ನಕಲಿ ಜನನ ಪ್ರಮಾಣ ಪತ್ರಗಳನ್ನು ನೀಡಲಾಗುತ್ತಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ADVERTISEMENT

ಜನನ ಪ್ರಮಾಣ ಪತ್ರಗಳಲ್ಲಿ ನಕಲಿ ವಿಳಾಸಗಳನ್ನು ನಮೂದಿಸಲಾಗಿದೆ. ಜನನ ಮತ್ತು ಮರಣಗಳ ನೋಂದಣಿ ಕಾಯ್ದೆಯಡಿ ಅಗತ್ಯವಿರುವ ಆಸ್ಪತ್ರೆ ದಾಖಲೆಗಳು ಅಥವಾ ಕಾನೂನು ಪ್ರಮಾಣ ಪತ್ರಗಳ ಕೊರತೆಯಿದೆ. ಈ ಜನನ ಪ್ರಮಾಣ ಪತ್ರಗಳನ್ನು ಆಧಾರ್, ಪಡಿತರ ಚೀಟಿಗಳು ಮತ್ತು ಮತದಾರರ ಗುರುತಿನ ಚೀಟಿಗಳಂತಹ ದಾಖಲೆಗಳನ್ನು ಪಡೆಯಲು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.