ADVERTISEMENT

4.5 ಲಕ್ಷ ಅಂಗನವಾಡಿಗಳಲ್ಲಿ ಶೌಚಾಲಯ ಇಲ್ಲ

ಪಿಟಿಐ
Published 9 ಮಾರ್ಚ್ 2018, 19:30 IST
Last Updated 9 ಮಾರ್ಚ್ 2018, 19:30 IST
4.5 ಲಕ್ಷ ಅಂಗನವಾಡಿಗಳಲ್ಲಿ ಶೌಚಾಲಯ ಇಲ್ಲ
4.5 ಲಕ್ಷ ಅಂಗನವಾಡಿಗಳಲ್ಲಿ ಶೌಚಾಲಯ ಇಲ್ಲ   

ನವದೆಹಲಿ: ದೇಶದಲ್ಲಿನ 4.5 ಲಕ್ಷ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ಸೌಲಭ್ಯ ಇಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಕುರಿತಾದ ಸಂಸದೀಯ ಸ್ಥಾಯಿ ಸಮಿತಿ ನೀಡಿರುವ ವರದಿ ತಿಳಿಸಿದೆ.

ದೇಶದಲ್ಲಿ ಒಟ್ಟು 13.6 ಲಕ್ಷ ಅಂಗನವಾಡಿ ಕೇಂದ್ರಗಳಿವೆ. ಇವುಗಳಲ್ಲಿ ಮೂರನೇ ಒಂದು ಭಾಗದಷ್ಟು ಮೂಲಸೌಕರ್ಯಗಳಿಂದ ವಂಚಿತವಾಗಿವೆ ಎಂದು ಉಲ್ಲೇಖಿಸಲಾಗಿದೆ.

ಶೇಕಡ 25ರಷ್ಟು ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯೇ ಇಲ್ಲ. ಇನ್ನು ಶೇಕಡ 36ರಷ್ಟು ಕೇಂದ್ರಗಳಲ್ಲಿ ಶೌಚಾಲಯಗಳು ಇಲ್ಲ. ಕರ್ನಾಟಕದಲ್ಲಿ ಶೇಕಡ 38.76ರಷ್ಟು ಕೇಂದ್ರಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ. ₹54.14 ಕೋಟಿ ವೆಚ್ಚದಲ್ಲಿ ಕೇಂದ್ರ ಸರ್ಕಾರ 70 ಸಾವಿರ ಶೌಚಾಲಯ ನಿರ್ಮಿಸಲು ಉದ್ದೇಶಿಸಿದೆ ಎಂದು ವರದಿ ತಿಳಿಸಿದೆ.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.